29
ರಚನೆಗಾರ: ದಾವೀದ. 
 1 ದೇವಪುತ್ರರೇ,* ದೇವಪುತ್ರರು “ಯಾಜಕರು” ಅಥವಾ “ದೇವದೂತರು” ಎಂಬರ್ಥವನ್ನು ಇದು ಕೊಡುತ್ತದೆ. ಯೆಹೋವನನ್ನು ಸ್ತುತಿಸಿರಿ! 
ಆತನ ಮಹಿಮೆಯನ್ನೂ ಶಕ್ತಿಯನ್ನೂ ಸ್ತುತಿಸಿರಿ. 
 2 ಯೆಹೋವನನ್ನು ಸ್ತುತಿಸುತ್ತಾ ಆತನ ಹೆಸರನ್ನು ಘನಪಡಿಸಿರಿ. 
ಪರಿಶುದ್ಧ ವಸ್ತ್ರಗಳನ್ನು ಧರಿಸಿಕೊಂಡು ಆತನನ್ನು ಆರಾಧಿಸಿರಿ.† ಪರಿಶುದ್ಧ … ಆರಾಧಿಸಿರಿ ಅಥವಾ “ನಿಮ್ಮ ಮಹಿಮಾಪೂರಿತವಾದ ಪರಿಶುದ್ಧ ಬಟ್ಟೆಗಳನ್ನು ಧರಿಸಿಕೊಂಡು ಆತನ ಮುಂದೆ ಅಡ್ಡಬೀಳಿರಿ.” 
 3 ಯೆಹೋವನ ಸ್ವರವು ಸಮುದ್ರದ ಮೇಲೆ ಕೇಳಿ ಬರುವುದು. 
ಮಹಾಸಾಗರದ ಮೇಲಿನ ಗುಡುಗಿನಂತೆ ಮಹಿಮಾ ಸ್ವರೂಪನಾದ ದೇವರ ಸ್ವರವು ಕೇಳಿಬರುವುದು. 
 4 ಯೆಹೋವನ ಸ್ವರವು 
ಆತನ ಶಕ್ತಿಯನ್ನೂ ಮಹಿಮೆಯನ್ನೂ ತೋರ್ಪಡಿಸುವುದು. 
 5 ಯೆಹೋವನ ಸ್ವರವು ದೇವದಾರು ವೃಕ್ಷಗಳನ್ನು ತುಂಡುತುಂಡು ಮಾಡುತ್ತದೆ. 
ಯೆಹೋವನು ಲೆಬನೋನಿನ ದೇವದಾರು ವೃಕ್ಷಗಳನ್ನೂ ಮುರಿದುಹಾಕುವನು. 
 6 ಯೆಹೋವನು ಲೆಬನೋನನ್ನು ನಡುಗಿಸಲು ಅದು ನರ್ತಿಸುತ್ತಿರುವ ಎಳೆಕರುವಿನಂತೆ ಕಾಣುತ್ತದೆ; 
ಸಿರ್ಯೋನ್ ಪರ್ವತವು ಕಂಪಿಸುವಾಗ ಕುಣಿದಾಡುವ ಎಳೆ ಹೋರಿಯಂತೆ ಕಾಣುತ್ತದೆ. 
 7 ಯೆಹೋವನ ಗರ್ಜನಕ್ಕೆ ಮಿಂಚುಗಳು ಥಳಥಳನೆ ಹೊಳೆಯುತ್ತವೆ. 
 8 ಯೆಹೋವನ ಗರ್ಜನದಿಂದ ಅರಣ್ಯವು ಕಂಪಿಸುವುದು. 
ಆತನ ಗರ್ಜನಕ್ಕೆ ಕಾದೇಶ್ ಅರಣ್ಯವು ನಡುಗುವುದು. 
 9 ಯೆಹೋವನ ಗರ್ಜನಕ್ಕೆ ಜಿಂಕೆಗಳು ಹೆದರಿಕೊಳ್ಳುತ್ತವೆ; 
ಕಾಡಿನ ಮರಗಳು ಬರಿದಾಗುತ್ತವೆ; 
ಆದರೆ ಆತನ ಆಲಯದಲ್ಲಿ ಜನರು ಆತನ ಮಹಿಮೆಯನ್ನು ಹಾಡಿಕೊಂಡಾಡುವರು. 
 10 ಜಲಪ್ರಳಯದ ಕಾಲದಲ್ಲೂ ಯೆಹೋವನು ರಾಜನಾಗಿದ್ದನು. 
ಯೆಹೋವನು ಸದಾಕಾಲ ರಾಜನಾಗಿರುವನು. 
 11 ಯೆಹೋವನು ತನ್ನ ಜನರಿಗೆ ಬಲವನ್ನು ದಯಪಾಲಿಸಲಿ. 
ಆತನು ತನ್ನ ಜನರಿಗೆ ಶಾಂತಿಯನ್ನು ಸ್ಥಾಪಿಸಲಿ.