Titus 
ಪೌಲನು ತೀತನಿಗೆ ಬರೆದ ಪತ್ರಿಕೆ  
 ೧
 ೧ ದೇವರ ಸೇವಕನೂ, * 2 ಕೊರಿ. 1:1ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು, ನಮ್ಮೆಲ್ಲರಿಗೆ ಹುದುವಾದ ನಂಬಿಕೆಯಲ್ಲಿ ನಿಜಕುಮಾರನಾಗಿರುವ ತೀತನಿಗೆ ಬರೆಯುವ ಪತ್ರ.  ೨ ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ. 
 ೩ ದೇವರು, ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು, ತಾನು ಆರಿಸಿಕೊಂಡವರ ನಂಬಿಕೆಯನ್ನು ಮತ್ತು ದೈವ ಭಕ್ತಿಯನ್ನು ಸತ್ಯದ ಜ್ಞಾನಕ್ಕನುಸಾರವಾಗಿ ದೃಢಪಡಿಸಲು ನಾನು ಕಾರ್ಯ ನಿರ್ವಹಿಸುತ್ತೇನೆ.  ೪ ಹಾಗು, ಆ ಸಂದೇಶವನ್ನು ಸಾರುವ ಜವಾಬ್ದಾರಿಯು ನಮ್ಮ ರಕ್ಷಕನಾದ ದೇವರ ಆಜ್ಞೆಯ ಅನುಸಾರವಾಗಿ ನನಗೆ ಒಪ್ಪಿಸಲ್ಪಟ್ಟಿದೆ ಹಾಗು ಸೂಕ್ತ ಕಾಲದಲ್ಲಿ ಸಂದೇಶವನ್ನು ಸಾರುವುದರ ಮೂಲಕ ತನ್ನ ವಾಕ್ಯವನ್ನು ನನಗೆ ಪ್ರಕಟಪಡಿಸಿದ್ದಾನೆ. 
ಸಭೆಯ ಹಿರಿಯರಲ್ಲಿ ಇರಬೇಕಾದ ಲಕ್ಷಣಗಳು 
 ೫ ಕ್ರೇಟ್ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ, ಪಟ್ಟಣ ಪಟ್ಟಣಗಳಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲಿ ಬಿಟ್ಟು ಬಂದೆ.  ೬  † 1 ತಿಮೊ. 3:1-4ಸಭೆಯ ಹಿರಿಯನು ದೋಷರಹಿತನೂ, ಏಕಪತ್ನಿಯುಳ್ಳವನೂ ಆಗಿರಬೇಕು; ಆತನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರ ಮಕ್ಕಳು ದುರ್ಮಾರ್ಗಿಗಳೂ ಮತ್ತು ಅವಿಧೇಯತೆಯ ಆರೋಪವಿಲ್ಲದವರು ಆಗಿರಬೇಕು.  ೭ ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ‡ 1 ತಿಮೊ. 3:8; 1 ಪೇತ್ರ 5:2ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ,  ೮ ಅತಿಥಿಸತ್ಕಾರಮಾಡುವವನೂ, ಒಳ್ಳೆಯದನ್ನು ಪ್ರೀತಿಸುವವನೂ, ವಿವೇಕಿಯು, ನೀತಿವಂತನೂ, ದೈವಭಾಕ್ತನು, § 1 ಕೊರಿ. 9:25ಜಿತೇಂದ್ರಿಯನೂ ಆಗಿದ್ದು,  ೯ ತಾನು * 1 ತಿಮೊ. 1:10 ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವುದಕ್ಕೂ, ಸುವಾರ್ತಾ ವಿರೋಧಿಗಳ ಬಾಯಿ ಕಟ್ಟುವುದಕ್ಕೂ ಶಕ್ತನಾಗಿರುವಂತೆ, ಕ್ರಿಸ್ತನ ಉಪದೇಶಕ್ಕೆ ಅನುಸಾರವಾಗಿ † 2 ಥೆಸ. 2:13-15ನಂಬತಕ್ಕ ವಚನಗಳನ್ನು, ದೃಢವಾಗಿ ಅವಲಂಭಿದಿಸಿದವನಾಗಿರಬೇಕು. 
 ೧೦ ಅನೇಕರು, ಪ್ರಮುಖವಾಗಿ ‡ ಅ. ಕೃ. 10:45; 11:2ಸುನ್ನತಿಹೊಂದಿದವರು, § 1 ತಿಮೊ. 1:6ಬರೀ ಮಾತುಗಾರರೂ, ಮೋಸಗಾರರೂ, ಅಧಿಕಾರಕ್ಕೆ ಒಳಪಡದವರು ಆಗಿದ್ದಾರೆ.  ೧೧ ಅವರು * 1 ತಿಮೊ. 6:5; 2 ಪೇತ್ರ. 2:3ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ † 2 ತಿಮೊ. 3:6ಕುಟುಂಬ ಕುಟುಂಬಗಳನ್ನೇ ಹಾಳುಮಾಡುತ್ತಾರಾದ್ದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.  ೧೨ ಕ್ರೇಟ್ ದ್ವೀಪದವರು ಯಾವಾಗಲೂ ಸುಳ್ಳುಗಾರರೂ, ದುಷ್ಟಮೃಗಗಳೂ, ಸೋಮಾರಿಗಳಾದ ಹೊಟ್ಟೆಬಾಕರೂ ಆಗಿದ್ದಾರೆಂದು ‡ ಅ. ಕೃ. 17:28ಅವರ ಸ್ವಂತ ಪ್ರವಾದಿಗಳಲ್ಲಿಯೇ ಒಬ್ಬ ಪ್ರವಾದಿಯು ಹೇಳಿದ್ದಾನೆ.  ೧೩ ಈ ಸಾಕ್ಷಿಯು ನಿಜವೇ ಆಗಿದೆ; ಆದಕಾರಣ ಅವರು § 1 ತಿಮೊ. 1:4ಯೆಹೂದ್ಯರ ಕಟ್ಟುಕಥೆಗಳಿಗೂ, ಸತ್ಯಭ್ರಷ್ಟರಾದ * ಕೊಲೊ. 2:22ಮನುಷ್ಯರ ವಿಧಿಗಳಿಗೂ ಲಕ್ಷ್ಯಕೊಡದೆ,  ೧೪  † ತೀತ. 2:1-2ನಂಬಿಕೆಯಲ್ಲಿ ಸ್ವಸ್ಥಚಿತ್ತರಾಗಿರುವಂತೆ ‡ ತೀತ. 2:15; 1 ತಿಮೊ. 5:20ಅವರನ್ನು ಕಠಿಣವಾಗಿ ಖಂಡಿಸಿ ತಿಳಿಸು. 
 ೧೫  § ಲೂಕ 11:41; 1 ತಿಮೊ. 4:3; ಅ. ಕೃ. 10:15ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, * ರೋಮಾ. 14:23ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸಾಕ್ಷಿಯೂ ಎರಡೂ ಅಶುದ್ಧವಾಗಿವೆ.  ೧೬  † 1 ಯೋಹಾ 2:4ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಭಿತುಪಡಿಸುತ್ತಾರೆ.